ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

image-874
Share It

ಬೆಳಗಾವಿ: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ.
ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವೈಶಾಲಿ ಅವರು ಶುಕ್ರವಾರ ಹೆರಿಗೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಾಡ್೯ನಲ್ಲಿ ದಾಖಲಾಗಿದ್ದರು. ಶನಿವಾರ ಬೆಳಗ್ಗೆ ಸಿಜೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಎನ್ನಲಾಗಿದೆ.

ಭಾನುವಾರ ಬೆಳಗ್ಗೆಯವರೆಗೂ ಹುಷಾರಾಗಿಯೇ ಇದ್ದರು. ಆದರೆ, ಇದ್ದಕ್ಕಿದ್ದಂತೆ ಎದೆನೋವು ಎಂದು ಹೇಳಲು ಶುರು ಮಾಡಿದ್ದರು. ಬೆಳಗ್ಗೆ 10.30ರ ವರೆಗೂ ಯಾವೊಬ್ಬ ವೈದ್ಯರೂ ಬರಲಿಲ್ಲ ಎಂದು ಮೃತ ವೈಶಾಲಿ ಅವರ ಅತ್ತೆ ಈರವ್ವ ದೂರಿದ್ದಾರೆ.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ವೈಶಾಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಬಾರದು. ನಮಗೆ ವೈದ್ಯರ ಮೇಲೆ ನಂಬಿಕೆ ಇಲ್ಲ ಎಂದು ಕುಟುಂಬಸ್ಥರು ಆಗ್ರಹಿಸಿದರು.

ಪತ್ನಿ ಸಾವಿನ ಸುದ್ದಿ ತಿಳಿದು ಈರಣ್ಣ ಕೊಟಬಾಗ್ ಅವರು ಆಘಾತಕ್ಕೊಳಗಾಗಿದ್ದಾರೆ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಆಸ್ಪತ್ರೆಯ ಸಮಸ್ಯೆ ಬಗೆಹರಿಸಿದ್ದರು ಎಂದು ಕೇಳಿದ್ದೆ. ಆದರೆ, ಆಸ್ಪತ್ರೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವೈದ್ಯರು ರೋಗಿಗಳಿಗೆ ಕ್ಯಾರೇ ಎನ್ನುತ್ತಿಲ್ಲ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ವೈದ್ಯರ ನಿರ್ಲಕ್ಷ್ಯದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆಂದು ಹೇಳಿದ್ದಾರೆ.


ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ದಿನಗಳ ಹಿಂದೆಯಷ್ಟೇ ಮೃತ ವೈಶಾಲಿ ಪತಿಯ ಜೊತೆ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇದೀಗ ಇದ್ದಕ್ಕಿದ್ದಂತೆ ಸಾವನ್ನಪ್ಪಿನ್ನಪ್ಪಿರುವುದು ಕುಟುಂಬಕ್ಕೆ ಆಘಾತ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.


Share It

You cannot copy content of this page