ಮೈಸೂರು: ಮೂಡಾ ಹಗರಣದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮೂಡಾ ಹಗರಣ ಆರೋಪ ಸರಕಾರಕ್ಕೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ತರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೂಡಾ ಅಧ್ಯಕ್ಷರಾಗಿ ದ್ದ ಮರೀಗೌಡಗೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು ಎನ್ನಲಾಗಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ. ಈ ನಡುವೆ ನ್ಯಾಯಾಂಗ ತನಿಖೆ ಕೂಡ ನಡೆಯುತ್ತಿದೆ. ಲೋಕಾಯುಕ್ತ ತನಿಖೆಯೂ ಆರಂಭವಾಗಿದೆ. ಈ ಎಲ್ಲ ಬೆಳವಣಿಗೆ ನಡುವೆ ಮರೀಗೌಡ ರಾಜೀನಾಮೆ ನೀಡಿದ್ದಾರೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಪತ್ನಿ ಅವರು 14 ನಿವೇಶನ ವಾಪಸ್ ನೀಡಿದ್ದಾರೆ. ಇದೀಗ ತನಿಖೆ ನಡೆಯುತ್ತಿದೆ.