ಧಾರವಾಡ: ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಫೆ. 20 ರವರೆಗೆ ತಡೆಯಾಜ್ಞೆ ವಿಧಿಸಿದೆ.
ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೀಡಿರುವ ಸಮನ್ಸ್ ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿಯ ವಿಚಾರಣೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆಯ ವೇಳೆ ಸಿಎಂ ಪತ್ನಿ ಪಾರ್ವತಿ ಅವರ ಪರ ಹಿರಿಯ ವಕೀಲ ವಾದ ಮಂಡನೆ ಮಾಡಿದರು. ಇದೇ ಸಂದರ್ಭದಲ್ಲಿ ಬೈರತಿ ಸುರೇಶ್ ಅವರ ಪರ ಸಿ.ವಿ. ನಾಗೇಶ್ ವಾದ ಮಂಡನೆ ಮಾಡಿದರು. ವಾದ ಆಲಿಸಿದ ನ್ಯಾಯಾಲಯ ಫೆ. 20 ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿವರೆಗೆ ಇಡಿ ಸಮನ್ಸ್ ತಡೆಯಾಜ್ಞೆಯನ್ನು ವಿಸ್ತರಿಸಿತು.
Updating…