ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: ಇಂದೇ ಅರ್ಜಿ ಸಲ್ಲಿಸಿ
ಕೊಪ್ಪಳದಲ್ಲಿ ಉದ್ಯೋಗ, ಜಿಲ್ಲಾ ಪಂಚಾಯತ್ ಅಲ್ಲಿ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳದ ಜಿಲ್ಲಾ ಪಂಚಾಯಿತಿಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸಿದರೆ ಇಂದೇ ಅರ್ಜಿ ಸಲ್ಲಿಸಿ. ಹೌದು ಕೊಪ್ಪಳದ ಜಿಲ್ಲಾ ಪಂಚಾಯಿತಿಯಲ್ಲಿ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿಯನ್ನು ಸಲ್ಲಿಸಿ. ಅರ್ಹತೆಗಳು ಮತ್ತು ಅರ್ಜಿ ಸಲ್ಲಿಕೆಯ ವಿಧಾನವನ್ನು ಈ ಕೆಳಗಿನಂತೆ ನೋಡೋಣ ಬನ್ನಿ.
ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ವಿವಿಧ ಕೆಲಸಗಳ ಮೇಲುಸ್ತುವಾರಿ ಮತ್ತು ಕಾರ್ಯಕ್ರಮಗಳ ಅನುಷ್ಠಾನ ಕ್ಕೆ ಸಂಭಂದಿಸಿದಂತೆ ಸಹಾಯಕ ಯೋಜನ ವ್ಯವಸ್ಥಾಪಕ ಹುದ್ದೆಯನ್ನು ಕೊಪ್ಪಳ ಜಿಲ್ಲಾ ಪಂಚಾಯಿತಿ ಕರೆದಿದೆ. ಅಭ್ಯರ್ಥಿಯನ್ನು ಹೊರ ಗುತ್ತಿಗೆ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊಪ್ಪಳ ಜಿಲ್ಲಾ ವೆಬ್ ಸೈಟ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
www.koppal.nic.in ನಲ್ಲಿ Online
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ
4-10-2024 , ಸಂಜೆ 5 ಗಂಟೆ
ಅರ್ಹತೆ:
ಬಿಇ, CS/E&C/I.S ಅಥವಾ MCA/BCA ಮುಗಿಸಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅನುಭವ ಮತ್ತು ವಯೋಮಿತಿ :
ಕನಿಷ್ಠ 3 ವರ್ಷ ಅನುಭವ ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು. ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷದೊಳಗೆ ಇರಬೇಕು. ಅರ್ಜಿಯನ್ನು ಎಲ್ಲ ಅಭ್ಯರ್ಥಿಗಳು ಉಚಿತವಾಗಿ ಸಲ್ಲಿಸಬಹುದಾಗಿದೆ.
ಸೂಚನೆ:
ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದರೆ ಅಂತಹ ಅಭ್ಯರ್ಥಿಯನ್ನು ಅನರ್ಹ ಗೊಳಿಸಲಾಗುವುದು.
ಅರ್ಜಿಯನ್ನು ಸಲ್ಲಿಸುವಾಗ ನೀಡಿದ ಮೊಬೈಲ್ ನಂಬರ್ ಮತ್ತು ವಿಳಾಸವನ್ನು ಬದಲಾಯಿಸಬಾರದು. ಅದೇ ವಿಳಾಸಕ್ಕೆ ಎಲ್ಲ ವ್ಯವಹಾರಿಕ ಪತ್ರಗಳನ್ನು ಕಳುಹಿಸಿ ಕೊಡಲಾಗುವುದು.
ಆಯ್ಕೆಯ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ತೀರ್ಮಾನವೇ ಅಂತಿಮ. ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ನೌಕರಿ ಸೇವೆಯಲ್ಲಿ ಇರುವ ಅಭ್ಯರ್ಥಿಗಳು ತಮ್ಮ ಇಲಾಖೆಯ ಮುಖ್ಯಸ್ಕರ ನಿರಾಕ್ಷೇಪಣಾ ಪತ್ರವನ್ನು ಹೊಂದಿರತಕ್ಕದ್ದು. ನೇಮಕಾತಿಯನ್ನು ಮುಂದೂಡುವ ಮತ್ತು ಬದಲಾಯಿಸುವ ಅಧಿಕಾರ ಪ್ರಾಧಿಕಾರಕ್ಕೆ ಇದೆ.
ಮೂಲ ದಾಖಲೆಗಳ ಪರಿಶೀಲನೆಗೆ ಆಯ್ಕೆಯಾಗುವ
ಅಭ್ಯರ್ಥಿಗಳಿಗೆ ಅಂಚೆ, ಕಛೇರಿ ದೂರವಾಣಿ ಮೂಲಕ ಮಾಹಿತಿ ತಿಳಿಸಲಾಗುವುದು. ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಯು ಹಾಜರಾಗದೆ ಇದ್ದರೇ ಅಂತಹ ಅಭ್ಯರ್ಥಿಯನ್ನು ವಜಾ ಗೊಳಿಸಲಾಗುವುದು.
ಅರ್ಜಿಯಲ್ಲಿ ಕೇಳಿದ ಪೂರ್ಣ ಮಾಹಿತಿಯನ್ನು ಭರ್ತಿ ಮಾಡದಿದ್ದಲ್ಲಿ ಅಭ್ಯರ್ಥಿಯನ್ನು ಪಟ್ಟಿಯಿಂದ ಕೈ ಬಿಡಲಾಗುವುದು. ಅಭ್ಯರ್ಥಿಗೆ ಕನ್ನಡ ಭಾಷೆಯ ಬರಬೇಕು ಮತ್ತು ಕನ್ನಡದಲ್ಲಿ ತೇರ್ಗಡೆಯಾಗಿರಬೇಕು.
ಹೆಚ್ಚಿನ ಮಾಹಿತಿಗೆ ಈ ನಂಬರ್ ಗೆ ಕರೆ ಮಾಡಬಹುದು.
9482193557


