ಉಪಯುಕ್ತ ಸುದ್ದಿ

ಕ್ರಿಸ್​​ಮಸ್ ಪ್ರಯುಕ್ತ ವಿಶೇಷ ರೈಲು ಸೇವೆ: ಬೆಂಗಳೂರಿಂದ ಕಲುಬುರಗಿ, ಮಂಗಳೂರಿಗೆ ಸ್ಪೆಷಲ್ ಟ್ರೈನ್ !

Share It

ಬೆಂಗಳೂರು: ಕ್ರಿಸ್​ಮಸ್ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕಿನಲ್ಲಿ ಎರಡು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ.

ರೈಲು ಸಂಖ್ಯೆ 06533 ಎಸ್‌ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿ. 24ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು, ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.

ಮತ್ತೇ ಇದೇ ರೈಲು (06590) ಕಲಬುರಗಿಯಿಂದ ಡಿ. 25 ರಂದು ಬೆಳಗ್ಗೆ 9.34ಕ್ಕೆ ಹೊರಟು, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ವಿಶೇಷ ರೈಲಿನಲ್ಲಿ ಒಂದು ಎಸಿ ಟು ಟೈರ್ ಬೋಗಿ, ಎರಡು ಎಸಿ ತ್ರಿ ಟೈರ್ ಬೋಗಿಗಳು, ಒಂಬತ್ತು ಸ್ವೀಪರ್ ಕ್ಲಾಸ್ ಬೋಗಿಗಳು, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್ಎಲ್‌ಆರ್ / ಡಿ ಬೋಗಿಗಳು ಸೇರಿದಂತೆ 18 ಬೋಗಿಗಳು ಇರಲಿವೆ.

ಯಶವಂತಪುರ-ಮಂಗಳೂರು ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿ.23 ಮತ್ತು 27 ರಂದು ರಾತ್ರಿ 11.55 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರ್​ಗೆ ಕರೆ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.


Share It

You cannot copy content of this page