ಬೆಂಗಳೂರು: ಹೊಸ ವರ್ಷಾಚರಣೆಗೆ ತಯಾರಿ ನಡೆಯುತ್ತಿದ್ದು, ಪೊಲೀಸರು, ಪಾಲಿಕೆ ಕೂಡ ಅಲರ್ಟ್ ಆಗಿದೆ. ಕ್ರಿಸ್ಮಸ್ ಮತ್ತು ನ್ಯೂ ಇಯರ್ ಸೆಲೆಬ್ರೇಷನ್ಗೆ ಕೆಲವೊಂದು ರೂಲ್ಸ್ ಗಳನ್ನ ಜಾರಿಗೆ ತರಲು ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಭದ್ರತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು ಬಂದೋಬಸ್ತ್ ಗೆ ಸೂಚನೆ ನೀಡಿದ್ದಾರೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್ನೈಟ್ ಸೆಲೆಬ್ರೆಷನ್ನಲ್ಲಿ ಭಾಗಿಯಾಗುತ್ತಾರೆ. ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ.