ಶೋಕಾಚರಣೆ ಹಿನ್ನೆಲೆ: ರಾಜಧಾನಿಯಲ್ಲಿ ಹೊಸ ವರ್ಷಾಚರಣೆಗೆ ಬೀಳಲಿದೆ ಬ್ರೇಕ್ ?

xr:d:DAFV3Ua8s54:3,j:44228783044,t:22122613

xr:d:DAFV3Ua8s54:3,j:44228783044,t:22122613

Share It

ಬೆಂಗಳೂರು: ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಸರಕಾರಿ ರಜೆ ಹಾಗೂ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ. ಹೀಗಾಗಿ, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದಿನಾಂಕ 27.12.2024ರ ಶುಕ್ರವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಆಯೋಜನೆ ಮಾಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿದೆ.

ಏಳು ದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಅಧಿಕೃತ ಸರಕಾರಿ ಕಾರ್ಯಕ್ರಮಗಳನ್ನು ನಡೆಸದಿರಲು ಸರಕಾರ ತೀರ್ಮಾನಿಸಿದೆ‌. ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ವರ್ಷ ಬ್ರಿಗೇಡ್ ರೋಡ್ ಮತ್ತು ಮಹಾತ್ಮ ಗಾಂಧಿ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗಳು ಅದ್ದೂರಿಯಾಗಿ ನಡೆಯುತ್ತಿತ್ತು. ಆದರೆ, ಈ ವರ್ಷ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಿಸಿದ್ದು, ಈ ಅಚರಣೆಗಳಿಗೆ ಬ್ರೇಕ್ ಬೀಳಲಿದೆ.


Share It

You cannot copy content of this page