ರಾಮನಗರ: ಕಳೆದ ಲೋಕಸಭಾ ಚುನಾವಣೆಯಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಸಿ.ಪಿ ಯೋಗೇಶ್ವರ್ ಅವರಿಗೆ ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಡಾ ಸಿ.ಎನ್ ಮಂಜುನಾಥ್ ಅವರ ಮನವೊಲಿಸುವಂತೆ ತನ್ನನ್ನು ಆಗ್ರಹಿಸುವ ಮೊದಲು ಯೋಗೇಶ್ವರ್ ಅವರೇ ಸ್ಪರ್ಧಿಸಲಿ ಎಂದು ಹೇಳಿದ್ದೆ ಎಂದು ಕುಮಾರಸ್ವಾಮಿ ಹೇಳಿದರು. ಈ ಮೂಲಕ ಪರೋಕ್ಷವಾಗಿ ಸಿ.ಪಿ.ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಉಪಚುನಾವಣೆಯ ಎನ್.ಡಿ.ಎ ಟಿಕೆಟ್ ನೀಡಿದರೆ ಅದನ್ನು ಜೆಡಿಎಸ್ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್.ಡಿ.ಕೆ ಸೂಚ್ಯವಾಗಿ ತಿಳಿಸಿದರು.