ಬೆಂಗಳೂರು: ನದಿಯೊಂದರ ಕಥೆಗಾರ,ಪರಿಸರ ಪರ ಬರಹಗಾರ ಸಾಹಿತಿ, Dr ನಾ ಡಿಸೋಜ ಅವರು ಇಂದು 05.01.2025 ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ Father Muller ಆಸ್ಪತ್ರೆಯಲ್ಲಿ ತಮ್ಮ ಕೊನೆ ಉಸಿರು ಎಳೆದಿದ್ದಾರೆ.
ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ಬಲ್ಲ ಮೂಲಗಳು ತಿಳಿಸಿವೆ. ನಾ.ಡಿಸೋಜಾ ಅವರು, ಮಡಿಕೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.