ನವದೆಹಲಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಸಾವನ್ನಪ್ಪಿದ್ದು, ಅವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ದೆಹಲಿ ಚುನಾವಣಾ ಭಾಷಣದಲ್ಲಿ ಮಾತನಾಡಿದ ಅವರು, ಈ ಘಟನೆಗೆ ನಾನು ವಿಷಾಧ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ಸರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ದುರಾದೃಷ್ಟವಶಾತ್ ಕೆಲವು ಪುಣ್ಯಾತ್ಮರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ನಾವು ಶಾಂತಿ ಕೋರುತ್ತೇನೆ. ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿದ್ದೇನೆ ಎಂದರು.
ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ, ಅನೇಕರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರು ನಾಪತ್ತೆಯಾಗಿರುವ ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದ್ದಾರೆ.