ವರದಿ ನಾರಾಯಣಸ್ವಾಮಿ ಸಿಎಸ್
ಹೊಸಕೋಟೆ : ಗ್ರಾಮೀಣ ಪ್ರದೇಶಗಳಿಗೆ ಮೂಲಸೌಲಭ್ಯ ಕಲ್ಪಿಸಲು ರಾಜ್ಯ ಸರಕಾರದಿಂದ ಕಳೆದ ಎರಡು ವರ್ಷದಲ್ಲಿ ದೊಡ್ಡಮಟ್ಟದ ಪ್ರಯತ್ನ ನಡೆದಿದೆ. ಹಾಗಾಗಿ, ಈಗ ಗ್ರಾಮಗಳ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ತಾಲೂಕಿನ ಕಸಬಾ ಹೋಬಳಿದು ದೊಡ್ಡ ಗಟ್ಟಿಗೆ ನಬ್ಬೆ ಗ್ರಾಮ ಪಂಚಾಯಿತಿ ಹಾಗೂ ಜಡಿಗೇನಹಳ್ಳಿ ಹೋಬಳಿಯ ವಾಗಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನ ದಡಿ ಸುಮಾರು 10 ಕೋಟಿ 20 ಲಕ್ಷ ರೂಪಾಯಿ ವೆಚ್ಚದ ಸಿ.ಸಿ ರಸ್ತೆ ಮತ್ತು ರಸ್ತೆ ಡಾಂಬರೀಕರಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ಹಳ್ಳಿಗೂ ಮೂಲಸೌಕರ್ಯ ಒದಗಿ ಸಲು ಒತ್ತು ನೀಡಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳ ಅಭಿವೃ ದ್ಧಿಗಾಗಿ ಸರಕಾರವು ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದೆ. ಹಂತಹಂತವಾಗಿ ಪ್ರತಿಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಪ್ರತಿ ಗ್ರಾಪಂ ವ್ಯಾಪ್ತಿ ಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಅಭಿವೃದ್ಧಿ ಕಾಠ್ಯ ಕೈಗೊಳ್ಳುವುದಾಗಿ ತಿಳಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಿ.ಎನ್.ನಾರಾಯಣಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೋಡಿಹಳ್ಳಿ ಸುರೇಶ್ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಪೂಜೇನ ಅಗ್ರ ಹಾರ ಕೃಷ್ಣಮೂರ್ತಿ, ಹೊಸಕೋಟೆ ಯೋಜನಾ ಪ್ರಾಧಿಕಾರ ಸದಸ್ಯ ಕೆ.ಸಿ.ಸುರೇಶ್ ಗೌಡ, ಸಮೇತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತ ರಾಜು, ಪಿಎಲ್ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುನಿಲ್, ಕೆಪಿಸಿಸಿ ಎಸ್.ಸಿ. ಘಟಕದ ರಾಜ್ಯ ಸಂಚಾಲಕ ಜೆ.ಎಂ.ಜಗನ್ನಾಥ್ ಮುಖಂಡ ರಾದ ವಾಗಟ ನರೇಂದ್ರಪ್ಪ, ಅಭಿಮಾನಿ ಮುನಿರಾಜು, ಕೆ.ಮಲ್ಲಸಂದ್ರ ಶೇಷಪ್ಪ, ರಾಜಪ್ಪ ಖರ್ಗೆ ಮತ್ತಿತರರು ಹಾಜರಿದ್ದರು