ರಾಜಕೀಯ ಸುದ್ದಿ

ಮಹಾರಾಷ್ಟ್ರದ ಸಾರಿಗೆ ಇಲಾಖೆ ಕಾರ್ಯದರ್ಶಿಯೊಂದಿಗೆ ಮಾತನಾಡಲು ನಮ್ಮ ಅಧಿಕಾರಿಗಳಿಗೆ ಹೇಳಿದ್ದೇನೆ: ಸಚಿವ ರಾಮಲಿಂಗಾರೆಡ್ಡಿ

Share It

ಬೆಳಗಾವಿ : ಮಹಾರಾಷ್ಟ್ರದಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಸಿಬ್ಬಂದಿ ಮೇಲೆ ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಗೂಂಡಾಗಳು ತೋರುತ್ತಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ KSRTC ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಬಳಿಕ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರದರ್ಶನ ನಡೆಸಿದ್ದಾರೆ, ಅದಾದ ನಂತರ ಶಿವಸೇನೆಯ ಕಾರ್ಯಕರ್ತರು ಪುಣೆ ಮತ್ತು ಮತ್ತು ನೆರೆರಾಜ್ಯದ ಕೆಲಭಾಗಗಳಲ್ಲಿ ಕೆಎಸ್ಸಾರ್ಟಿಸಿ ಬಸ್​ಗಳಿಗ ಮಸಿ ಬಳಿಯುವ ಕೆಲಸ ಮಾಡಿದ್ದಾರೆ.

ಇದು ಸರಿಯಲ್ಲ, ಮಹಾರಾಷ್ಟ್ರದ ಸಾರಿಗೆ ಇಲಾಖೆ ಕಾರ್ಯದರ್ಶಿಯವರೊಂದಿಗೆ ಮಾತಾಡುವಂತೆ ತಮ್ಮ ಸಾರಿಗೆ ಇಲಾಖೆ ಕಾರ್ಯದರ್ಶಿಯವರಿಗೆ ಹೇಳಿರುವುದಾಗಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.


Share It

You cannot copy content of this page