ಉಪಯುಕ್ತ ಸುದ್ದಿ

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೇ ಸಂಚಾರಕ್ಕೆ ಮುಕ್ತ

Share It

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇ ಸಂಚಾರಕ್ಕೆ ಮುಕ್ತವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕರ್ನಾಟಕ ಭಾಗದ ಮಾರ್ಗದ ಕೆಲಸಗಳು ಸಂಪೂರ್ಣ ಹಿನ್ನೆಲೆ, ಸಂಚಾರಕ್ಕೆ ಮುಕ್ತವಾಗಿದೆ. ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. 3 ರಾಜ್ಯಗಳನ್ನೊಳಗೊಂಡ ಎಕ್ಸ್‌ಪ್ರೆಸ್‌ ಹೈವೇ ಮಾರ್ಗವಿದು. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ರಾಜ್ಯ ಭಾಗದ 71 ಕಿ.ಮೀ ನ ಸಂಪೂರ್ಣ ಕಾರ್ಯ ಮುಕ್ತಾಯವಾಗಿದೆ.

ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ ಇದಾಗಿದ್ದು, ಸದ್ಯ ಹೊಸಕೋಟೆ ಸ್ಯಾಟ್‌ಲೈಟ್ ರಿಂಗ್ ರಸ್ತೆಯಿಂದ ಆಂಧ್ರ ಗಡಿ ಸುಂದರಪಾಳ್ಯವರೆಗೆ ಸಂಚಾರಕ್ಕೆ ರಸ್ತೆ ರೆಡಿಯಾಗಿದೆ. ವೇಗದ ಮಿತಿ 100 ಕಿ.ಮೀಗೆ ಸೀಮಿತಗೊಳಿಸಲಾಗಿದೆ.

ಆಂಧ್ರಪ್ರದೇಶ, ತಮಿಳುನಾಡು ಭಾಗದಲ್ಲಿ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿ ಇನ್ನೂ ಮುಂದುವರೆದಿದೆ. ಈ ವರ್ಷಾಂತ್ಯಕ್ಕೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗುವ ಸಾಧ್ಯತೆ ಇದೆ. ಈ ಎಕ್ಸ್‌ಪ್ರೆಸ್‌ ಹೈವೇಗೆ ಕರ್ನಾಟಕದಲ್ಲಿ ಮಾಲೂರು, ಬಂಗಾರಪೇಟೆ ಮತ್ತು ಆಂಧ್ರ ಗಡಿ ಸುಂದರ ಪಾಳ್ಯದಲ್ಲಿ 3 ಇಂಟರ್ ಚೇಂಜ್‌ಗಳಿವೆ. ಸಂಪೂರ್ಣ ಕಾಮಗಾರಿ‌ ಮುಕ್ತಾಯದ ಬಳಿಕ ಟೋಲ್ ಸಂಗ್ರಹ ಆರಂಭವಾಗುವ ಸಾಧ್ಯತೆ ಇದೆ.

ಇನ್ನೂ ಸ್ಥಳೀಯರು ಓಡಾಟ ಮಾಡುತ್ತಿದ್ದು, ಸದ್ಯಕ್ಕೆ ಟೋಲ್ ದರ ನಿಗದಿಪಡಿಸಿಲ್ಲ. ಸರ್ವೀಸ್ ರಸ್ತೆಗಳಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರ್ವೀಸ್ ರಸ್ತೆಗಳನ್ನು ನೀಡಿಲ್ಲ. ಯಾವುದೇ ಅಡಚಣೆಯಿಲ್ಲದೆ ಚೆನ್ನೈವರೆಗೆ ನೆಮ್ಮದಿಯಾಗಿ ಈ ರಸ್ತೆಯಲ್ಲಿ ಪ್ರಯಾಣಿಸಬಹುದು. ಕೇವಲ 3 ರಿಂದ 4 ಗಂಟೆಗಳಲ್ಲಿ ಚೆನ್ನೈ ತಲುಪಬಹುದಾಗಿದೆ. ಹಾಗಾಗಿ ಬೇರೆ ಹೆದ್ದಾರಿಗಳಿಗೆ ಹೋಲಿಸಿದರೆ ಈ ರಸ್ತೆಯ ಟೋಲ್‌ ಶುಲ್ಕ ಕೂಡ ಅಧಿಕವಾಗಿರುವ ಸಾಧ್ಯತೆ ಹೆಚ್ಚಿದೆ.

ಒಟ್ಟಿನಲ್ಲಿ ಬೆಂಗಳೂರಿಂದ ಚೆನ್ನೈಗೆ ಹೋಗಬೇಕು ಅಂದರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡಬೇಕಿತ್ತು, ಆದರೆ ಈ ಎಕ್ಸ್ಪ್ರೆಸ್ ಹೈವೇ ನಿಂದ ಕೇವಲ 3 ರಿಂದ 4 ಗಂಟೆಗಳಲ್ಲಿ ಚೆನ್ನೈ ತಲುಪಬಹುದಾಗಿದೆ.


Share It

You cannot copy content of this page