ಬೆಂಗಳೂರು: ಆರ್ ಟಿಒ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಮಂಡ್ಯದ ಮೋಟಾರು ವಾಹನ ನೀರೀಕ್ಷಕಿ ವಾಣಿಶ್ರೀ ಸರಕಾರಿ ವಾಹನದಲ್ಲಿ ಯೇ ಕುಳಿತು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 5 ರಂದು ಸಾಮಾಜಿಕ ಜಾಲತಾಣದಲ್ಲಿ ಬಿತ್ತರವಾಗಿದ್ದ ದೃಶ್ಯಾವಳಿಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದರು.
ಆ ಸಂಬಂಧ ತನಿಖೆ ನಡೆಸಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಡ್ಯ ಇವರು ವಾಣಿಶ್ರೀ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು. ಅವರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಗಳು, ವಾಣಿಶ್ರೀ ಎಂ.ಎನ್ ಅವರ ವಿರುದ್ಧದ ಇಲಾಖಾ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.
ಜತೆಗೆ, ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಇಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಸ್ಥಳಾಂತರಿಸಿದ್ದಾರೆ.