ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಪಾಸ್ ಆದವರಿಗೆ ಒಳ್ಳೆಯ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ನೀವು ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಪಾಸ್ ಮಾಡಿ ಕೆಲಸಕ್ಕಾಗಿ ಹುಡುಕುತ್ತಿದ್ದೀರಾ? ಅಥವಾ ಮುಂದೆ ಓದಲು ಇಷ್ಟವಿಲ್ಲದೆ ಈಗಿರುವ ವಿದ್ಯಾರ್ಹತೆಯಲ್ಲಿ ಉದ್ಯೋಗವನ್ನು ಪಡೆಯಬೇಕು ಎಂದು ಬಯಸಿದರೆ ಇಲ್ಲಿದೆ ನಿಮಗೊಂದು ಸುವರ್ಣ ಅವಕಾಶ.
ಕೇಂದ್ರ ಸರ್ಕಾರದ ಸಶಸ್ತ್ರ ಪಡೆಗಳ ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಪಡೆಯು ಜೆನೆರಲ್ ಡ್ಯೂಟಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅಭ್ಯರ್ಥಿಗೆ ಅಗತ್ಯವಾಗಿ ಬೇಕಾದ ಅರ್ಹತೆಗಳನ್ನು ಈ ಕೆಳಗಿನಂತೆ ನೋಡಬಹುದಾಗಿದೆ.
ಈ ಹುದ್ದೆಗಳು ಕ್ರೀಡಾ ಕೋಟಾದ ಹುದ್ದೆಯಾಗಿದ್ದು, ಒಟ್ಟು 133 ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ 21, 700- 69,100 ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 4/3/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 2/4/2025
ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳು :
ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಪಾಸ್ ಮಾಡಿರಬೇಕು.
ಯಾವುದೇ ಕ್ರೀಡೆಯಲ್ಲಿ ರಾಜ್ಯ,ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಪದಕಗಳನ್ನು ಪಡೆದಿರಬೇಕು.
ಕ್ರೀಡೆಗಳು ಮುಖ್ಯವಾಗಿ 3/4/2024 ರಿಂದ 2/4/2025 ನಡುವೆ ನಡೆದಿರಬೇಕು.
ವಯಸ್ಸಿನ ಅರ್ಹತೆ :
ಕನಿಷ್ಠ 18 ವರ್ಷ – ಗರಿಷ್ಠ 23 ವರ್ಷ.
ಒಬಿಸಿ ಗೆ 3 ವರ್ಷ ವಯಸ್ಸಿನ ಸಡಿಲಿಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ :
ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ, ಮಹಿಳಾ ಹಾಗೂ ಸೈನಿಕ ಅಭ್ಯರ್ಥಿಗೆ ಉಚಿತ . ಉಳಿದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಇರುತ್ತದೆ.
ಅರ್ಜಿಯನ್ನು ಈ ವಿಳಾಸಕ್ಕೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


