ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ: ರಂಬನ್ ಜಿಲ್ಲೆಯಲ್ಲಿ ಮೂವರ ಸಾವು
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತದಿಂದ ಮೂವರು ಮೃತಪಟ್ಟಿರುವುದು ವರದಿಯಾಗಿದೆ.
ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭೂಮಿ ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತ ಮೂವರಲ್ಲಿ ಇಬ್ಬರು ಮಕ್ಕಳು ಸೇರಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಜಮ್ಮುವಿನಲ್ಲಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಅಕಾಲಿಕ ಮಳೆಗೆ ಅನೇಕ ಮನೆಗಳಿಗೆ ಹಾನಿಯಾಗಿದೆ. ಗುಡ್ಡಕುಸಿತದ ಭೀತಿಯೂ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಸೇನೆಯನ್ನು ಸಜ್ಜುಗೊಳಿಸಲಾಗಿದೆ.


