ಸುದ್ದಿ

‘ಆಪರೇಷನ್ ಸಿಂಧೂರ್’ ಗೆ ಬಲಿಯಾಗಿದ್ದು ಪಾಕಿಸ್ತಾನದ 100 ಉಗ್ರರು !

Share It

ಶ್ರೀನಗರ : ಭಾರತೀಯ ಸೇನೆ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ್ದು, ಈ ದಾಳಿಗಳಲ್ಲಿ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್‌ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನ ಬಳಸಲಾಯಿತು.

ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ. ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಮತ್ತು ಜೈಶ್‌ನ ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದರು.

1971 ರ ಯುದ್ಧದ ನಂತರ ಪಾಕಿಸ್ತಾನದ ವಿರುದ್ಧ ಮೊದಲ ಬಾರಿಗೆ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಬೆಳಗಿನ ಜಾವ 1.44 ಕ್ಕೆ ‘ಆಪರೇಷನ್ ಸಿಂಧೂರ್’ ಎಂಬ ಸಂಕೇತನಾಮದೊಂದಿಗೆ ಕಳೆದ ಮಂಗಳವಾರ ರಾತ್ರಿಯಿಡೀ ದಾಳಿ ನಡೆಸಿ 9 ಉಗ್ರಗಾಮಿ ಶಿಬಿರಗಳನ್ನು ನಾಶಪಡಿಸಿದೆ.

ಇದೇ ರೀತಿ ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಬೀಡು ಬಿಟ್ಟಿದ್ದ ಜೈಷ್-ಇ-ಮೊಹಮ್ಮದ್ ಮತ್ತು ಲಷ್ಕರ್-ಇ-ತೊಯಿಬಾ ಉಗ್ರಗಾಮಿ ಸಂಘಟನೆಗಳ ಶಿಬಿರಗಳ ಮೇಲೆ ಭಾರತೀಯ ಸೇನೆ ಭಾರೀ ಗುಂಡಿನ ದಾಳಿ ನಡೆಸಿತು.

ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಸೇನೆಯು ಸಹ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.


Share It

You cannot copy content of this page