ಬೆಂಗಳೂರು: ಬಳ್ಳಾರಿ ಜನಾರ್ದನ ರೆಡ್ಡಿ ನಿವಾಸದ ಬಳಿ ಮಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಜನಾರ್ದನ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಶುರುವಾದ ಗಲಾಟೆ, ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಇದು ಬಳ್ಳಾರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿದ್ದು, ಜನಾರ್ದನ ರೆಡ್ಡಿ, ಶ್ರೀರಾಮುಲು ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ್ದು ಜನಾರ್ದನ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಎಂದು ದೂರು ದಾಖಲಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇದು ಬಳ್ಳಾರಿಯಲ್ಲಿ ಬಿಗುವಿನ ವಾತಾವರಣ ನಿರ್ಮಿಸಿದೆ.

