ಅಪರಾಧ ಸುದ್ದಿ

ಅಂಜಲಿ ಅಂಬಿಗೇರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

Share It

ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಯುವಕನಿಂದಲೇ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರು. ಬಿಡುಗಡೆ ಮಾಡಲಾಗಿದೆ.

ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿಯ ಮನೆಯಲ್ಲಿ ಮೇ. 15 ರಂದು ಅಂಜಲಿ ಕೊಲೆ ನಡೆದಿತ್ತು. ಗಿರೀಶ್ ಸಾವಂತ್ ಎಂಬಾತ ಆಕೆಯನ್ನು ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೊಲೆ ಮಾಡಿದ್ದ. ಈ ವೇಳೆ ಭೇಟಿ ನೀಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್, ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದ್ದರು.

ಸರಕಾರವು ವರದಿಯನ್ನಾಧರಿಸಿ, ಕುಡುಂಬ ಕಾನೂನುಬದ್ಧ ವಾರಾಸುದಾರರಿಗೆ 5 ಲಕ್ಷ ರು. ಪರಿಹಾರ ಬಿಡುಗಡೆ ಮಾಡಿದೆ. ಧಾರವಾಡ ಜಿಲ್ಲಾಧಿಕಾರಿ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಟಿ.ಎ. ಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.


Share It

You cannot copy content of this page