ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ: ಸಿಎಂ, ಡಿಸಿಎಂ ಬೇಟಿಯಾದ ಯೋಗೇಶ್ವರ್
ಬೆಂಗಳೂರು: ರಾಜ್ಯದ 3ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಹಾಟ್ ಸ್ಪಾಟ್ ಆಗಿದೆ.
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು ಕುಳಿತ್ತಿದ್ದ ಯೋಗೇಶ್ವರ್ ಅವರನ್ನು ಡಿ.ಕೆ. ಶಿವಕುಮಾರ್ ತನ್ನ ಕಡೆ ಸೆಳೆದುಕೊಂಡಿದ್ದಾರೆ.
ಸಿಪಿ ಯೋಗೇಶ್ವರ್ ಅವರು ಬುಧವಾರ ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿ ಬಳಿಕ ಇಬ್ಬರು ಸಿಎಂ ಸಿದ್ದರಾಯ್ಯನವರನ್ನು ಭೇಟಿಯಾಗಿದ್ದು, ಈ ಮೂಲಕ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.
ಸಿ.ಪಿ.ಯೋಗೇಶ್ವರ್ ನಿನ್ನೆಯವರೆಗೂ ಎನ್ ಡಿಎ ಇಂದ ಟಿಕೇಟ್ ಸಿಗಬಹುದು ಎಂದು ಕಾದು ಕುಳಿತ್ತಿದ್ದರು. ಸಂಜೆ ವರೆಗೂ ಕಾಯುತ್ತೇನೆ ಎಂದು ಯೋಗೇಶ್ವರ್ ಅವರು ಪ್ರಲ್ಹಾದ್ ಜೋಶಿ, ಸಂಸದ ಡಾ.ಸಿ.ಎನ್.ಮಂಜುನಾಥ್ಗೆ ತಿಳಿಸಿ ನಿನ್ನೆ ಚನ್ನಪಟ್ಟಣದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದರು. ಆದ್ರೆ, ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಅವರು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

