ಮೈಸೂರು: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ವಿಮಾನ ಪ್ರಯಾಣ ರದ್ದುಗೊಳಿಸಿರುವ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿ ಬೆಂಗಳೂರು ತಲುಪಲಿದ್ದಾರೆ.
ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು 4 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಕಾರ್ಯಕ್ರಮ ನಿಗದಿಯಾಗಿತ್ತು.ಆದರೆ, ಹವಾಮಾನ ವೈಪರೀತ್ಯದ ಕಾರಣಕ್ಕೆ ಸಿಎಂ ವಿಮಾನ ಪ್ರಯಾಣವನ್ನು ಸ್ಥಗಿತಗೊಳಿಸಲಾಯಿತು.
ವಿಮಾನ ಪ್ರಯಾಣ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬೆಂಗಳೂರಿನ ಕೆಲ ಕಾರ್ಯಕ್ರಮಗಳು ರದ್ದಾಗಿವೆ.
ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ನಿಗದಿಯಂತೆ ಕಟ್ಟಡ ಕುಸಿತದ ಸಂಭವಿಸಿರುವ ಬಾಬು ಸಾಬ್ ಪಾಳ್ಯಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಳಲು ಕೇಳಬೇಕಾಗಿತ್ತು. ಆದರೆ ವಿಮಾನಯಾನ ರದ್ದಾದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

