ಬೆಂಗಳೂರು: ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ”ಯನ್ನು ಜಾರಿಗೊಳಿಸಲು ಒತ್ತಾಯಿಸಿದರು.
ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ನೂರಕ್ಕೂ ಅಧಿಕ ಮಂದಿ ನಿಯೋಗದಲ್ಲಿದ್ದರು.
ಮಹಾ ಒಕ್ಕೂಟದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಉಪಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ ಸಚಿವ ಸಂಪುಟದಲ್ಲಿ ವರದಿ ಕುರಿತು ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.