ರಾಜಕೀಯ ಸುದ್ದಿ

ಶಿಗ್ಗಾವಿ ಬಂಡಾಯ ಅಭ್ಯರ್ಥಿಯ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

Share It

ಶಿಗ್ಗಾಂವ್: ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದರು.

ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಶಿಗ್ಗಾವಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾದ ಖಾದ್ರಿ ಅವರನ್ನು ಕರೆಸಿಕೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವಂತೆ ಸೂಚನೆ ನೀಡಿದ ಸಿಎಂ ಮುಂದೆ ಸೂಕ್ತ ಸ್ಥಾನಮಾನದ ಭರವಸೆ ನೀಡಿದರು.

ಈ ವೇಳೆ ಅಶೋಕ್ ಪಟ್ಟಣಶೆಟ್ಟಿ, ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿ ಹಲವು ನಾಯಕರು ಹಾಜರಿದ್ದರು.


Share It

You cannot copy content of this page