ಅಪರಾಧ ಸುದ್ದಿ

ಮುಡಾ ಹಗರಣ: ಬಿಲ್ಡರ್​​ ಎನ್​. ಮಂಜುನಾಥ್​ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

Share It

ಬೆಂಗಳೂರು: ಮುಡಾದಲ್ಲಿ ಹಗರಣ ಹಿನ್ನೆಲೆ ಇಡಿ ಅಧಿಕಾರಿಗಳು ಬೆಂಗಳೂರಿನ ಜೆಪಿ ನಗರದಲ್ಲಿರುವ ಬಿಲ್ಡರ್​​ ಎನ್​. ಮಂಜುನಾಥ್​ ಎಂಬುವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮುಡಾಗು ಮತ್ತು ಬೆಂಗಳೂರಿನ ಬಿಲ್ಡರ್​ ಎನ್​.ಮಂಜುನಾಥ್​ಗೂ ಏನು ಸಂಬಂಧ ಅಂತ ತನಿಖೆಗೆ ಇಳಿದ ಇಡಿ ಅಧಿಕಾರಿಗಳಿಗೆ ಹಲವು ವಿಚಾರಗಳು ತಿಳಿದುಬಂದಿವೆ. ಎನ್.ಕಾರ್ತಿಕ್ ಡೆವಲಪರ್ ಮಾಲೀಕನಾಗಿರುವ ಎನ್​.ಮಂಜುನಾಥ್ ಮೈಸೂರಿನಲ್ಲಿ ಲೇಔಟ್ ನಿರ್ಮಾಣ ಮಾಡಿದ್ದರು. ಮೈಸೂರಿನಲ್ಲಿ ಕಾರ್ತಿಕ್ ಬಡಾವಣೆ ಹೆಸರಿನಲ್ಲಿ ಲೇಔಟ್​ಗಳನ್ನು​ ನಿರ್ಮಾಣ ಮಾಡಿದ್ದರು.

ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುತ್ತಿದ್ದ ವೇಳೆ, ಅಲ್ಲಿನ ಅಧಿಕಾರಿಗಳಿಗೆ ಲಂಚ ನೀಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಅ.28ರಂದು ಬೆಳ್ಳಂ ಬೆಳಗ್ಗೆ ಬಿಲ್ಡರ್​ ಎನ್​. ಮಂಜುನಾಥ್​ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇಡಿ ಅಧಿಕಾರಿಗಳು ಕೆಲ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಇಡಿ ಅಧಿಕಾರಿಗಳು ಎನ್​. ಮಂಜುನಾಥ್ ಅವರ ಕಚೇರಿ, ಬ್ಯಾಂಕ್ ಖಾತೆ ಪರಿಶೀಲನೆಗೆ ತೆರಳಿದ್ದಾರೆ.

ಮುಡಾ ಅಧಿಕಾರಿಗಳು ನೀಡಿದ ದಾಖಲೆಗಳ ಆಧಾರದ ಮೇಲೆ ಇಡಿ ಅಧಿಕಾರಿಗಳು ಬಿಲ್ಡರ್​ ಎನ್​. ಮಂಜುನಾಥ್​ ಅವರ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಇಡಿ ಅಧಿಕಾರಿಗಳು ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.


Share It

You cannot copy content of this page