ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿಯಾಗಿರುವ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಸೆಪ್ಟೆಂಬರ್ 25 ಕ್ಕೆ ಮುಂದೂಡಿದೆ.
ಇಂದು ಮುಂದೂಡಿಕೆಯಾಗಿದ್ದ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಪುನರಾರಂಭಿಸಿದ 57ನೇ ಸಿಸಿಎಚ್ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿತು.
ಮತ್ತೊಂದೆಡೆ ಬೆಂಗಳೂರಿನ ಹೈಕೋರ್ಟ್ ಇದೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-16 ಆರೋಪಿ ಕೇಶವಮೂರ್ತಿ ಅವರಿಗೆ ಜಾಮೀನು ನೀಡಿ ಆದೇಶ ನೀಡಿತು.
ಆದರೆ, ಪ್ರಭಾವಿಗಳಾಗಿ ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಹುದು ಎಂಬ ಕಾರಣಕ್ಕೆ 57ನೇ ಸಿಸಿಎಚ್ ನ್ಯಾಯಾಲಯ ದರ್ಶನ್ ಮತ್ತು ಪವಿತ್ರಾಗೌಡ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸುವ ಸಾಧ್ಯತೆ ಇದೆ ಎಂದು ಕಾನೂನು ಪಂಡಿತರು ತರ್ಕಿಸಿದ್ದಾರೆ.
ಕೇಶವ ಮೂರ್ತಿ ಯನ್ನು ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ಆರೋಪದ ನಂತರ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈ ನಡುವೆ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.