ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಸಿಗಲಿಲ್ಲ ಜಾಮೀನು: ಲೈಂಗಿಕ ದೌರ್ಜನ್ಯ ಆರೋಪಿಯ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

GridArt_20241111_141145172
Share It

ನವದೆಹಲಿ: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್​ ರೇವಣ್ಣ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು. ಪ್ರಜ್ವಲ್​ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಪ್ರಜ್ವಲ್​ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಈ ವೇಳೆ ನನಗೆ ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹೀಗಾಗಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಮುಕುಲ್ ರೋಹ್ಟಗಿ ವಾದ ಒಪ್ಪದೆ. ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ ಎಂದು ಅರ್ಜಿ ವಜಾಗೊಳಿಸಿತು.


Share It

You cannot copy content of this page