ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಗುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಬೆಂಗಳೂರು ಸಚಿವರು, ಶಾಸಕರು ಚುನಾವಣಾ ಆಯುಕ್ತ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಒಳಗೊಂಡ ನಿಯೋಗವು ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂ ಎಲ್ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಮತ್ತಿತರರು ನಿಯೋಗದಲ್ಲಿದ್ದರು.

