ಉಪಯುಕ್ತ ಸುದ್ದಿ

ಕೆಪಿಎಸ್‌ಸಿ ಅಧ್ಯಕ್ಷರ ರಾಜೀನಾಮೆಗೆ ಸದಸ್ಯರು ಅಂಗೀಕರಿಸಿದ್ದ ನಿರ್ಣಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Share It

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಯೋಗದ ಸದಸ್ಯರು ಅಂಗೀಕರಿಸಿದ್ದ ನಿರ್ಣಯದ ಜಾರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿ, ಸದಸ್ಯರು ಅಂಗೀಕರಿಸಿದ್ದ ನಿರ್ಣಯದ ಆಧಾರದ ಮೇಲೆ ಯಾವುದೇ ಮುಂದಿನ ಕ್ರಮ ಕೈಗೊಳ್ಳದಂತೆ ಪ್ರತಿವಾದಿಗಳಿಗೆ ಮಧ್ಯಂತರ ಆದೇಶ ನೀಡಿದೆ.

ಇತ್ತೀಚೆಗೆ ಕೆಪಿಎಸ್‌ಸಿಯಲ್ಲಿ ಉಂಟಾಗಿದ್ದ ಆಡಳಿತಾತ್ಮಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಆಯೋಗದ ಸದಸ್ಯರು ಅಧ್ಯಕ್ಷರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವಂತೆ ನಿರ್ಣಯ ಕೈಗೊಂಡಿದ್ದರು. ಈ ನಿರ್ಣಯವನ್ನು ಪ್ರಶ್ನಿಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೊರೆ ಹೋಗಿದ್ದರು.


Share It

You cannot copy content of this page