ಲಂಚ ಪಡೆದ ಹಣ ನುಂಗಿದ ಅಧಿಕಾರಿ: ವಾಪಸ್ ಕಕ್ಕಿಸಿದ ಲೋಕಾಯುಕ್ತ ಅಧಿಕಾರಿಗಳು

IMG-20241222-WA0000
Share It

ಕೊಪ್ಪಳ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಲಂಚದ ಹಣವನ್ನು ನುಂಗಿದ್ದು, ನುಂಗಿದ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿರುವ ಘಟನೆ ಕೊಪ್ಪಳದಲ್ಲಿ‌ ನಡೆದಿದೆ.

ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಶನಿವಾರ ಸಂಜೆ ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಎನ್​ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶನಿವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ದಸ್ತಗಿರ್ ಅಲಿಯನ್ನು ಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಲೋಕಾಯುಕ್ತ ಪೊಲೀಸರ ಬಲೆಗೆ ಬೀಳ್ತಿದ್ದಂತೆ ದಸ್ತಗಿರ್ ಅಲಿ ಲಂಚ ಪಡೆದಿದ್ದ ಎರಡು ಸಾವಿರ ರೂಪಾಯಿ ನೋಟನ್ನು ನುಂಗಿ ಸಾಕ್ಷಿನಾಶ ಮಾಡಲು ಯತ್ನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ನೀರು ಕುಡಿಸಿ ವಾಂತಿ ಮಾಡಿಸಿ, ಹಣ ಹೊರಗೆ ತೆಗೆಸಿದ್ದಾರೆ.

ಸದ್ಯ ದಸ್ತಗಿರ್ ಅಲಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಯಚೂರು ಲೋಕಾಯುಕ್ತ ಎಸ್ಪಿ ಶಶಿಧರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಕೊಪ್ಪಳ ಲೋಕಾಯುಕ್ತ ಪಿಐ ನಾಗರತ್ನ, ಸುನೀಲ್ ಮೇಗಿಲಮನಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.


Share It

You cannot copy content of this page