ಅನೈತಿಕ ಸಂಬಂಧ : ಮಾರಣಾಂತಿಕ ಹಲ್ಲೆ
ಬೆಳಗಾವಿ : ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ನಡೆದಿದೆ.
ಅರವಳ್ಳಿ ಗ್ರಾಮದ ಮಕ್ತುಂಮಸಾಬ ನಜೀರಸಾಬ ತಟಗಾರ (23) ಹಲ್ಲೆಗೊಳಗಾದ ಯುವಕ.
ಸವಟಗಿ ಗ್ರಾಮದ ಮುತ್ತು ಗಣಾಚಾರಿ (37) ಎಂಬವರು ಮಕ್ತುಂಸಾಬ ಎಂಬವರ ಕುತ್ತಿಗೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು.
ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಯುವಕನನ್ನು ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


