ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ
ಶಿಗ್ಗಾವಿ: ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರವನ್ನು ಸಲ್ಲಿಸಿದರು.
ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಮಾಜಿ ಶಾಸಕ ಖಾದ್ರಿ ಬಂಡಾಯದ ನಡುವೆಯೂ ಗೆಲುವಿನ ಭರವಸೆ ಮೂಡಿದ್ದು, ನಾಯಕರು ಹುರುಪಿನಿಂದ ಮೆರವಣಿಗೆ ನಡೆಸಿದರು. ರಾಜ್ಯದ ಅನೇಕ ನಾಯಕರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಈಶ್ವರ್ ಕಂಡ್ರೆ, ಉಸ್ತುವಾರಿ ಸಚಿವರಾದ ಶಿವಾನಂದ್ ಪಾಟೀಲ್, ಜಮೀರ್ ಅಹ್ಮದ್ ಖಾನ್, ರಹೀಮ್ ಖಾನ್, ಇಸ್ಮಾಯಿಲ್ ತಮಟಗಾರ್ ಮೊದಲಾದ ನಾಯಕರು ಹಾಗೂ ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು,


