ಬೆಂಗಳೂರು: ವ್ಯಕ್ತಿಯೊಬ್ಬರು ಮಂತ್ರಿ ಮಾಲ್ ನ ಎರಡನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ.
ಮಂಜುನಾಥ್ ಎಂಬ 55 ವರ್ಷದ ವ್ಯಲ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಶವವನ್ನು ಕೆ.ಸಿ. ಜನರಲ್ ಆಸ್ಪತಗೆ ಶವಪರೀಕ್ಷೆಗೆ ಕಳುಹಿಸಿದ್ದು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಮಂಜುನಾಥ್ ಸುಮಾರು ಎರಡು ಕೋಟಿ ರು. ವರೆಗೆ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲು ಸಾಧ್ಯವಾಗದೆ ಮಂತ್ರಿ ಮಾಲ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.