ವಕ್ಫ್​​ ಬೋರ್ಡ್​ ವಿವಾದ: ಇಂದು ಬಿಜೆಪಿಯಿಂದ ರಾಜ್ಯಾದ್ಯಂತ ಧರಣಿ

BJP_CON
Share It

ಬೆಂಗಳೂರು: ರಾಜ್ಯಾದ್ಯಂತ ವಕ್ಫ್​​ ಬೋರ್ಡ್​ ವಿರುದ್ಧ ಇಂದು ಬಿಜೆಪಿ ರಣಕಹಳೆ ಮೊಳಗಿಸಲಿದೆ.

ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್​ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಪ್ರತಿಭಟನೆಗೆ ಆಕ್ರೋಶ ಹೊರ ಹಾಕಿದ್ದು, ಗ್ಯಾರಂಟಿಗಳನ್ನು ನಿಲ್ಲಿಸುವಂತೆ ಮಾಡ್ಬೇಕು ಎಂಬುದು ಬಿಜೆಪಿ ಹುನ್ನಾರ. ನೋಟಿಸ್ ಹಿಂಪಡೆಯುವಂತೆ ಸೂಚಿಸಿದ ಮೇಲೂ, ಬಿಜೆಪಿ ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ? ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿ ಕಿಡಿಕಾರಿದ್ದಾರೆ.


Share It

You cannot copy content of this page