‘ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್’ : ದರ್ಶನದ ಕ್ಯೂಗಳಲ್ಲಿ ನೆರಳು, ನೀರಿನ ವ್ಯವಸ್ಥೆ

Share It

ಬೆಂಗಳೂರು: ರಾಜ್ಯಾದ್ಯಂತ ದೇವಾಲಯಗಳಲ್ಲಿ ದರ್ಶನ ಪಡೆಯಲು ಹೊರಡುವ ಭಕ್ತರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ಲ ದೇವಸ್ಥಾನಗಳಲ್ಲಿ ಭಕ್ತಿರಿಗೆ ಸುಸಜ್ಜಿತ ದರ್ಶನ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದ್ದು,  ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈಗಾಗಲೇ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಆನೇಕ ಸುಧಾರಣೆಗಳನ್ನು ತರಲಾಗಿದೆ. ಕೆಲವು ಪ್ರಮುಖ ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಂಡು ಮುಂದಿನ ಇಪ್ಪತ್ತು ವರ್ಷದ ಭವಿಷ್ಯದ ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿ ಮಾಡಲಾಗುತ್ತಿದೆ. ಕ್ಯೂ ವ್ಯವಸ್ಥೆ, ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆಯ ಸುಧಾರಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತೆಯೇ ಕ್ಯೂ ನಿಲ್ಲುವಾಗ ಭಕ್ತರಿಗೆ ಆಗುವ ತೊಂದರೆ ಬಗೆಹರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.


Share It

You May Have Missed

You cannot copy content of this page