ಕಲಬುರಗಿ: ಭಾರತ ಮತ್ತು ಪಾಕ್ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಎಲ್ಲಾ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಳು ಎಂದಿನಂತೆ ಮುಂದುವರೆದಿವೆ. ಆದರೂ ಭದ್ರತೆ ಕ್ರಮಗಳನ್ನು ಎಂದಿನಂದಕ್ಕಿಂತ ಹೆಚ್ಚು ಮಾಡಲಾಗಿದೆ.
ಹೀಗಾಗಿ ಕಲಬುರಗಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸಿದೆ. ಕಲಬುರಗಿ ನಗರ ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದ್ದು, ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಬಸ್ ಸ್ಯಾಂಡ್, ರೈಲ್ವೆ ನಿಲ್ದಾಣ, ಸೇರಿದಂತೆ ಜನಬೀಡ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ.
ಇನ್ನು ರಸ್ತೆ ಬದಿ ಬಿದ್ದಿರುವ ಅನಾಮೇಧಯ ವಸ್ತುಗಳು, ಜೊತೆಗೆ ಬೈಕ್ ಗಳನ್ನ ಸಹ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.