ಅಪರಾಧ ಸುದ್ದಿ

ಗುಜರಾತ್ ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ : 250 ಜನ ಸಾವಿನ ಸಾಧ್ಯತೆ?

Share It

ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದ ಸಮೀಪವೇ ಏರ್ ಇಂಡಿಯಾ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ.

ಅಹಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ಟೇಕ್ ಆಫ್ ಆದ ಕೆಲವೇ ಸಮಯಕ್ಕೆ ನೆಲಕ್ಕುರುಳಿದೆ. ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಸ್ಫೋಟಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ.

ವಿಮಾನದಲ್ಲಿ 250 ಜನ ಪ್ರಯಾಣಿಕರು ಹಾಗೂ ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ. ರಕ್ಷಣಾ ಪಡೆಗಳು ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದು, ಸಾವಿನ ಸಂಖ್ಯೆ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಸಿಎಂ ಹಾಗೂ ಪೊಲೀಸ್ ಆಯುಕ್ತರ ಜತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ.

Updating…


Share It

You cannot copy content of this page