ವಕ್ಫ್ ಆಸ್ತಿ ವಿವಾದ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

GridArt_20241110_084833891
Share It

ಬೆಂಗಳೂರು: ರೈತರಿಗೆ ವಕ್ಫ್ ಸಂಬಂಧ ‌ನೀಡಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದಾರೆ.

ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.

ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್​ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.


Share It

You cannot copy content of this page