ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಶೂಟಿಂಗ್ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳು ತಡೆ ಹಾಕಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಸಾಣಾಪುರ ಮತ್ತು ರಂಗಾಪುರ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ತಯಾರಿ ನಡೆಸಿತ್ತು. ಸೆಟ್ ನಿರ್ಮಿಸಲು ಈಗಾಗಲೇ ಯೋಜನೆ ರೂಪಿಸಿದ್ದ ಚಿತ್ರ ತಂಡ ಶೂಟಿಂಗ್ ಗೆ ಎಲ್ಲ ತಯಾರಿ ಮಾಡಿಕೊಂಡಿತ್ತು. ಇದೀಗ ನೊಟೀಸ್ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಶೂಟಿಂಗ್ ಗೆ ತಡೆ ನೀಡಿದ್ದಾರೆ.
ಈ ಪ್ರದೇಶವಾಗಿ ನೀರು ನಾಯಿ ಸಂರಕ್ಷಿತ ಪ್ರದೇಶ ಎಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಅನುಮತಿ ಪಡೆಯದೆ ಶೂಟಿಂಗ್ ನಡೆಸಲು ಚಿತ್ರತಂಡ ತಯಾರಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ನೊಟೀಸ್ ನೀಡಿರುವ ಅಧಿಕಾರಿಗಳು ಶೂಟಿಂಗ್ ನಿಲ್ಲಿಸಿದ್ದಾರೆ.
ಕಲ್ಟ್ ಚಿತ್ರ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಜಮೀರ್ ಅಹಮದ್ ಖಾನ್ ಪುತ್ರ ಜಹೇದ್ ಖಾನ್ ಅಭಿನಯದ ಚಿತ್ರವಾಗಿದೆ. ಚಿತ್ರತಂಡ ಈಗಾಗಲೇ ವಿಜಯನಗರ ಜಿಲ್ಲೆಯ ಹೊಸಪೇಟೆ ಮತ್ತು ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೂಟಿಂಗ್ ನಡೆಸಿದೆ. ಇದೀಗ ಅನುಮತಿ ಪಡೆಯದೆ ಚಿತ್ರೀಕರಣ ನಡೆಸಲು ಮುಂದಾಗಿ ಸಂಕಷ್ಟಕ್ಕೆ ಸಿಲುಕಿದೆ.