ರಾಜಕೀಯ ಸುದ್ದಿ

ಕರಾವಳಿಗೆ ಹೈಕೋರ್ಟ್ ಸಂಚಾರ ಪೀಠ ಸಧ್ಯಕ್ಕಿಲ್ಲ

Share It

ಬೆಳಗಾವಿ : ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿಗೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪಿಸುವ ವಿಚಾರ ಸರಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ ಸಭಾ ನಾಯಕ ಎನ್ .ಎಸ್. ಬೋಸರಾಜು ಹೇಳಿದರು.

ವಿಧಾನ ಪರಿಷತ್ ನಲ್ಲಿ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ವ್ಯಾಪ್ತಿಗೆ ಬರುವ ಪ್ರದೇಶಗಳ ವ್ಯಾಜ್ಯಗಳನ್ನು ಈಗಿರುವ ಉಚ್ಛ ನ್ಯಾಯಾಲಯದಲ್ಲಿ ಸಮರ್ಥವಾಗಿ ನಿರ್ವಹಿಸಲಾಗುತ್ತಿದೆ.

ಆಯಾ ರಾಜ್ಯಗಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಾಜ್ಯಪಾಲರ ಅನುಮತಿಯೊಂದಿಗೆ ಸಂಚಾರಿ ಪೀಠ ಸ್ಥಾಪಿಸುವ ಅಧಿಕಾರ ಹೊಂದಿದ್ದಾರೆ. ಹೀಗಾಗಿ ಮುಂದೆ ವಿಚಾರ ಮಾಡಲಾಗುವುದು ಎಂದು ತಿಳಿಸಿದರು.


Share It

You cannot copy content of this page