ಬೆಂಗಳೂರು: ಸ್ವೀವರ್ಡ್ ಹುದ್ದೆಗೆ ನೇಮಕ ಮಾಡಲು ಲಂಚ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿಹಿಡಿದಿದೆ.
ಕಿಂಗ್ಸ್ ಪೋರ್ಟ್ ಟರ್ಫ್ ಕ್ಲಬ್ ನಲ್ಲಿ ಸ್ಟೀವರ್ಡ್ ಹುದ್ದೆಗೆ ಎಲ್. ವಿವೇಕಾನಂದ ಅವರನ್ನು ನೇಮಕ ಮಾಡಲಾಗಿತ್ತು. ಅವರನ್ನು ಮೂರು ವರ್ಷಕ್ಕೆ ನೇಮಕ ಮಾಡಲು 1.3 ಕೋಟಿ ರು. ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.
ಬಿ ರಿಪೋರ್ಟ್ ರದ್ದುಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ ಎನ್.ರಮೇಶ್, 82 ನೇ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಗಜಾನನ್ ಭಟ್ ನೇತೃತ್ವದ ನ್ಯಾಯಪೀಠ, ರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಮುಕ್ತಾಯಗೊಳಿಸಿ, ಬಿ ರಿಪೋರ್ಟ್ ಎತ್ತಿಹಿಡಿದಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ ನಿವಾರಣೆಯಾದಂತಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತದಲ್ಲಿ ದೂರು ನೀಡಲಾಗಿತ್ತು. ದೂರಿನ ಅನ್ವಯ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ರಿಪೋರ್ಟ್ ರದ್ದು ಕೋರಿ ಎನ್.ಆರ್. ರಮೇಶ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಕ್ತಾಯಗೊಳಿಸಿರುವ ನ್ಯಾಯಾಲಯ ಸಿದ್ದರಾಮಯ್ಯಗೆ ರಿಲೀಫ್ ನೀಡಿದೆ.