ದುಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುವ ಚಾಂಪಿಯನ್ಸ್ ಟ್ರೋಪಿ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಆರಂಭವಾದ ಒಂದೇ ನಿಮಿಷದಲ್ಲಿ ಒಂದು ಲಕ್ಷ ಟಿಕೆಟ್ ಮಾರಾಟವಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ.
ಭಾರತ ಮತ್ತು ಪಾಕಿಸ್ತಾನ ಪಂದ್ಯ ಯಾವಾಗಲೂ ಕುತೂಹಲಕಾರಿ ಪಂದ್ಯವಾಗಿರುತ್ತದೆ. ಜಿದ್ದಾಜಿದ್ದಿನಿಂದ ಕೂಡಿರುವ ಪಂದ್ಯದ ವೀಕ್ಷಣೆಗೆ ವಿಶ್ವಾದ್ಯಂತ ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಮಾರಾಟಕ್ಕೆ ಬಹುಬೇಡಿಕೆಯಿದೆ.
ಐಸಿಸಿ ಟೂರ್ನಿಯಲ್ಲಿ ಈವರೆಗೆ ಭಾರತ ಒಂದೇ ಒಂದು ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೋತಿಲ್ಲ. ಈ ದಾಖಲೆಯೇ ಟಿಕೆಟ್ ಬೇಡಿಕೆ ಹೆಚ್ಚಲು ಬಹುಮುಖ್ಯ ಕಾರಣವಾಗುತ್ತದೆ. ಭಾರತ ಮಾತ್ರವಲ್ಲ, ವಿಶ್ವದೆಲ್ಲೆಡೆ ಇರುವ ಕ್ರಿಕೆಟ್ ಪ್ರೆಮಿಗಳು, ಈ ಪಂದ್ಯ ವೀಕ್ಷಣೆಗೆ ಕಾಯುತ್ತಿದ್ದಾರೆ.
ಭಾರತ- ಪಾಕಿಸ್ತಾನ ನಡುವಿನ ಪಂದ್ಯ ಇದೇ ಫೆ. 24 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2.30 ಕ್ಕೆ ಪಂದ್ಯ ಆರಂಭವಾಗಲಿದೆ.