ಉಪಯುಕ್ತ ಸುದ್ದಿ

ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ

Share It

ಬೆಂಗಳೂರು ದಕ್ಷಿಣ: ಬಿಡದಿ ಟೌನ್‌ಶಿಪ್‌ಗೆ ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ ನೀಡಲಾಗುವುದು ಎಂದು ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಫರ್ ನೀಡಿದ್ದಾರೆ.

ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನೂರಾರು ರೈತರು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾತನಾಡಿದರು.

ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ ವ್ಯಕ್ತಪಡಿಸಿದರು. ಡಿನೋಟಿಫಿಕೇಷನ್ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು. ಇಂಟಿಗ್ರೇಟೆಡ್ ಟೌನ್ ಶಿಪ್ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮಾಡಿದ್ದರು. ಇದೀಗ ಆ ಯೋಜನೆಗೆ ೨೦,೦೦೦ ಕೋಟಿ ಖರ್ಚು ಮಾಡುತ್ತಿದ್ದೇವೆ.

ಈ ಹಿಂದೆ ಬಿಜೆಪಿ, ಜೆಡಿಎಸ್ ಸರ್ಕಾರ ಇದನ್ನ ತಿರಸ್ಕರಿಸಬಹುದಿತ್ತು. ಇದನ್ನು ನಾವು ಡಿನೋಟಿಫಿಕೇಷನ್ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಹೊಸ ಉದ್ಯೋಗ ಸೃಷ್ಟಿಸಲು ಮುಂದಾಗಿದ್ದೇವೆ. ಇಲ್ಲಿಗೆ ಮೆಟ್ರೋ ತರಲು ಕೂಡ ಪ್ಲ್ಯಾನ್ ಮಾಡುತ್ತಿದ್ದೇವೆ ಸಾವಿರ ಕೋಟಿ ವೆಚ್ಚದಲ್ಲಿ ಭೈರಮಂಗಲ ಅಭಿವೃದ್ಧಿಗೆ ಚಿಂತಿಸಿದ್ದೇವೆ.

ನಗರದ ರೀತಿಯಲ್ಲಿ ೨೬ ಹಳ್ಳಿಗಳನ್ನು ಅಭಿವೃದ್ಧಿ ಮಾಡುತ್ತೇವೆ. ಯೋಜನೆಗಾಗಿ ಯಾವುದೇ ಹಳ್ಳಿಗಳನ್ನು ಸ್ಥಳಾಂತರ ಮಾಡಲ್ಲ. ಭೂಸ್ವಾಧೀನವಾದ ರೈತರು ಹಣ ಪಡೆಯದಿದ್ದರೆ ೫೦:೫೦ ಅನುಪಾತದಲ್ಲಿ ಸೈಟ್ ನೀಡಲು ಐತಿಹಾಸಿಕ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.


Share It

You cannot copy content of this page