ಹೊಸದಿಲ್ಲಿ: ಕಳೆದು ಒಂದು ತಿಂಗಳಲ್ಲಿ ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಕರೆಗಳು ಹೆಚ್ಚಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ.
ಕಳೆದ ಎರಡು ವಾರಗಳಲ್ಲಿ 300-400 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಇದರಿಂದ ನೂರಾರು ವಿಮಾನಗಳ ಸಮಯ ಬದಲಾವಣೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸಾವಿರಾರು ಪ್ರಯಾಣಿಕರನ್ನು ಗಂಟೆಗಟ್ಟಲೆ ಕಾಯಿಸಲಾಗಿದೆ. ಈ ಎಲ್ಲ ಬೆಳವಣಿಗೆಗೆ ಕಾರಣವಾದರು ಮಾತ್ರ ಯಾರು ಎಂಬುದು ಗೊತ್ತಾಗುತ್ತಿಲ್ಲ.
ವಿಮಾನಗಳಿಗೆ ಬಾಂಬ್ ಬೆದರಿಕೆಯಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಬಿಟ್ಟುಬಿಡುತ್ತಾರೆ. ಇದರಿಂದ ಸಹಜವಾಗಿಯೇ ಪ್ರಯಾಣಿಕರು ಮತ್ತು ಸಂಬಂಧಿಕರು ಫ್ಯಾನಿಕ್ ಆಗುತ್ತಿದ್ದಾರೆ. ಅನಿವಾರ್ಯವಾಗಿ ತಪಾಸಣೆ, ಭದ್ರತಾ ಕಾರ್ಯ ಹೆಚ್ಚಿಸುವುದು ಅನಿವಾರ್ಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದವರು ಯಾರು ಎಂಬ ಬಗ್ಗೆ ಮಾಹಿತಿಯೇ ಸಿಗುವುದಿಲ್ಲ.
ಈ ಎಲ್ಲ ಕಾರಣಗಳಿಗೆ ಸಾಮಾಜಿಕ ಜಾಲತಾಣಗಳು ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸೋಷಿಯಲ್ ಮೀಡಿಯಾ, ಎಕ್ಸ್ ಮತ್ತು ಮೆಟಾ ಕಂಪನಿಗಳು ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪತ್ರ ಬರೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದೆ. ಇದರಲ್ಲಿ ವಿಫಲವಾಗುವ ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ನೀಡಿದೆ
ಸಾಮಾಜಿಕ ಜಾಲತಾಣದಲ್ಲಿ ಇಂತಹ ಪೋಸ್ಟ್ ಗಳನ್ನು ಹಾಕುವುದು, ಶೇರ್ ಮಾಡುವುದು, ಕಮೆಂಟ್ ಮಾಡುವುದನ್ನು ನಿರ್ಬಂಧಿಸಬೇಕು. ಇದರಿಂದ ರಾಷ್ಟ್ರೀಯ ಭದ್ರತೆಗೆ ದಕ್ಕೆಯಾಗುವ ಸಾಧ್ಯತೆಗಳಿವೆ. ಜತೆಗೆ ಇಂತಹ ಪೋಸ್ಟ್ ಮಾಡುವವರ ವಿವರಗಳು ಪೊಲೀಸ್ ಇಲಾಖೆಗೆ ಸಿಗುವಂತೆ ಸಾಮಾಜಿಕ ಜಾಲತಾಣ ಸಂಸ್ಥೆಗಳು ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಐಟಿ ಆಕ್ಟ್ 2021 ರ ಪ್ರಕಾರ ಸೋಷಿಯಲ್ ಮೀಡಿಯಾಗಳಲ್ಲಿ ಕಂತಹ ಕಿಡಿಗೇಡಿತನಕ್ಕೆ ಅವಕಾಶ ನೀಡದಂತೆ ಕಡಿವಾಹ ಹಾಕಬೇಕು. ಕಿಡಿಗೇಡಿಗಳ ಈ ಕೃತ್ಯದಿಂದ ಭಾರತದ ಆರ್ಥಿಕ ಭದ್ರತೆಗೆ ದಕ್ಕೆಯಿದೆ. ವಿಮಾನಗಳ ವಿಳಂಬ ಮತ್ತು ಆತಂಕದ ವಾತಾವರಣ ಸೃಷ್ಡಿ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು. ಜತೆಗೆ ಆಂತರಿಕ ಭದ್ರತೆಯ ಬಗ್ಗೆಯೂ ಅನುಮಾನ ಮೂಡಿಸುತ್ತದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.