ಅಪರಾಧ ಸುದ್ದಿ

ಅಥಣಿ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಸಂಬಂಧಿಕರ ಆಕ್ರೋಶ

Share It

ಬೆಳಗಾವಿ : ಅಥಣಿ ಆಸ್ಪತ್ರೆಯಲ್ಲಿ ಬಾಣಂತಿ ಒಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.
ಮುತ್ತವ್ವ ಸಂತೋಷ ಗೊಳಸಂಗಿ (21) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಮುತ್ತವ್ವ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಜನವರಿ 31ರಂದು ಮುತ್ತವ್ವಗೆ ಹೆರಿಗೆ ದಿನಾಂಕ ನೀಡಲಾಗಿತ್ತು. ಆದರೆ ಆಕೆಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಪಿ ವ್ಯತ್ಯಾಸ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಗಿತ್ತು. ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವವಾಗಿ ಬಾಣಂತಿ ಅಸ್ವಸ್ಥರಾಗಿದ್ದರು.

ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಹೇಳಿದ್ದರು. ಬೇರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮುತ್ತವ್ವ ಸಾವನ್ನಪ್ಪಿದ್ದಾರೆ. ಬಾಣಂತಿ ಸಾವಿಗೆ ವೈದ್ಯರ ಬೇಜವಾಬ್ದಾರಿಯೇ ಕಾರಣ ಎಂದು ಪೋಷಕರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share It

You cannot copy content of this page