‘ಬಿಜೆಪಿ ಅಂದ್ರೆ ಬುರುಡೆ ಜನರ ಪಕ್ಷ : ಅವರ ತಲೆಯಲ್ಲಿ ಮೆದುಳು ಇರೋದೆ ಡೌಟು’ : ರಾಮಲಿಂಗ ರೆಡ್ಡಿ ಕಿಡಿ

Share It

ಬೆಂಗಳೂರು: ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ  ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.

ಸಾರಿಗೆ ಸಂಸ್ಥೆಗಳು ಸಾಲ ತೆಗೆದುಕೊಳ್ಳುತ್ತಿವೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಅದಕ್ಕೆ ಎಂದಿದ್ದಾರೆ.

ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿಜೆಪಿ ಅವರು.

ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ ರೂ 2.30 ಲಕ್ಷ ಕೋಟಿ ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.

1947 ರಿಂದ 2014 ರವರೆಗೆ ದೇಶದ‌ 67 ವರ್ಷಗಳ ಇತಿಹಾಸದಲ್ಲಿ ಎಲ್ಲಾ ಪ್ರಧಾನಮಂತ್ರಿಗಳು ಮಾಡಿದ ಸಾಲ ರೂ. 53 ಲಕ್ಷ ಕೋಟಿಗಳು. ಇಂದಿನ ಕೇಂದ್ರ ಸರ್ಕಾರದ ಮಾಡಿರುವ ಸಾಲ 2014-2025 ರ ಅವಧಿಗೆ ರೂ 149 ಲಕ್ಷ ಕೋಟಿಗಳು. ಇಲ್ಲಿಯವರೆಗೆ ಒಟ್ಟು ಸಾಲ ಇರುವುದು ರೂ 202 ಲಕ್ಷ ಕೋಟಿ. ಅಂದರೆ ಅತ್ಯಂತ  ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಸಾಲ‌ ಮಾಡಿದ ಕೀರ್ತಿ ಬಿಜೆಪಿ ಪಕ್ಷಕ್ಕೆ ಸಲ್ಲಬೇಕು ಎಂದು ತಿಳಿಸಿದ್ದಾರೆ.

ದೇಶದ ಜನರಿಗೆ ಸುಳ್ಳು ಅಂಕಿ ಅಂಶಗಳನ್ನು ನೀಡಿ, ದಾರಿ ತಪ್ಪಿಸುತ್ತಾ, ಜನರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯಾವುದೇ ಪ್ರಶ್ನೆಗೆ ಉತ್ತರ ನೀಡದಿರುವುದು ದುರಂತವೇ ಸರಿ ಎಂದಿದ್ದಾರೆ.


Share It

You May Have Missed

You cannot copy content of this page