ಕೆ.ಆರ್.ಪೇಟೆ: KSRTC ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 25 ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುಂದನಹಳ್ಳಿ ಗೇಟ್ ನಲ್ಲಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಆಲನಹಳ್ಳಿಯಿಂದ ಕೆ.ಆರ್. ಪೇಟೆಗೆ ಬರುತ್ತಿದ್ದ ಬಸ್ ಇದಾಗಿದ್ದು, ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ 50 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಮಕ್ಕಳು ಸೇರಿ 25 ಜನರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗಾಯಾಳುಗಳನ್ನು ಕೆ.ಆರ್. ಪೇಟೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.