ಬೆಂಗಳೂರು: ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಭಾಗಿಯಾಗಿದ್ದರು.
ಈ ವೇಳೆ ನಡೆದ ಗಂಗಾ ಆರತಿ ನೆರವೇರಿಸಿ, ಸಮಸ್ತ ಜನತೆಯ ಒಳಿತಿಗೆ ಭಗವಂತನಲ್ಲಿ ಪ್ರಾರ್ಥಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.
ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಅರ್ಚಕರು ಬೆಳಗಿದ ದೀಪಗಳು ಕಾವೇರಿ, ಕಪಿಲೆ, ಸ್ಪಟಿಕ ನದಿಗಳ ಸಂಗಮದಲ್ಲಿ ಕಂಗೊಳಿಸಿದವು.
ಮುಜರಾಯಿ ಇಲಾಖೆ ಟಿ.ನರಸೀಪುರದ ಕುಂಭಮೇಳ ಆಯೋಜನೆಗೆ 6 ಕೋಟಿ ರು. ಅನುದಾನ ನೀಡಿತ್ತು. ಸ್ವತಃ ಮುತುವರ್ಜಿಯಿಂದ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಅವರು ಕುಂಭಮೇಳದ ಯಶಸ್ಸಿಗೆ ಸಹಕಾರ ನೀಡಿದ್ದರು.