ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾದವು.
ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘‘ಇದು ಹನಿಟ್ರ್ಯಾಪ್ ಸರ್ಕಾರ’’ ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ, ಪ್ರತಿಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಟ್ಟಾದರು.