ಕಲಬುರಗಿ: ನಗರದ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಹೃದಯಾಘಾತದಿಂದ ಅಬಕಾರಿ ಇಲಾಖೆಯ ಪಿಎಸ್ಐ ಮಂಜುನಾಥ (46) ಅವರು ನಿಧನರಾದ ಘಟನೆ ನಡೆದಿದೆ.
ಮೃತ ಮಂಜುನಾಥ ಅವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತರಬೇತಿ ನಿಮಿತ್ತ ಕಲಬುರಗಿಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿದೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ವೈದ್ಯರ ಪ್ರಯತ್ನ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಅಕಾಲಿಕ ನಿಧನದಿಂದ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಶೋಕದ ವಾತಾವರಣ ಆವರಿಸಿದೆ.