ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆದಿತ್ಯವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮಾದಕ ವಸ್ತು ವಿರುದ್ಧ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ನಗರದ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅವರು ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸಿದ್ದರು.
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಮೂಲದ 58 ರ ಹರೆಯದ ನಾಸೀರ್ ಅವರು 2010 ಬ್ಯಾಚ್ ನ ಪೊಲೀಸ್ ಅಧಿಕಾರಿಯಾಗಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ “ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಘೋಷ ವಾಕ್ಯದೊಂದಿಗೆ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಭಾಗಿಯಾಗಿದ್ದ ವೇಳೆ ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾರೆ. ಪಕ್ಕದಲ್ಲೇ ಇದ್ದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಲ್ಲಿನ ವೈದ್ಯರು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.

